AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಮಾಡುವ ಭರವಸೆ ನೀಡಿ ಮೋಸ: ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಪ್ರೇಯಸಿಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕೌರನಹಳ್ಳಿಯ ಶೇಖರ್ ಎಂಬುವರುಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹಾಗಿದ್ದರೆ, ಪ್ರೇಮಿಗಳನ್ನು ದೂರ ಮಾಡಲು ಕಾರಣವೇನು? ಯುವತಿ ಪೋಷಕರಿಗೆ ಯುವಕನ ಮೇಲೆ ಏಕೆ ಸಿಟ್ಟು? ಇಲ್ಲಿದೆ ಕಾರಣ

ಮದ್ವೆ ಮಾಡುವ ಭರವಸೆ ನೀಡಿ ಮೋಸ: ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಶೇಖರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ|

Updated on: Jul 04, 2025 | 10:42 PM

Share

ಚಿಕ್ಕಬಳ್ಳಾಪುರ, ಜುಲೈ 04: ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ನಿವಾಸಿ ಶೇಖರ್ (35 ವರ್ಷ) ವಿಷ ಸೇವಿಸಿದ ಪ್ರಿಯಕರ. ಶೇಖರ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನ ಬಸ್ ಚಾಲಕರಾಗಿದ್ದಾರೆ. ಶೇಖರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದಾರೆ.

ಯುವತಿ ಚಿಕ್ಕಬಳ್ಳಾಪುರ ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ಪ್ರತಿದಿನ ಕಾಲೇಜು ಬಸ್ಸಿನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದರು. ಇಬ್ಬರ ಮಧ್ಯೆ ಸ್ನೇಹ ಬಳೆದಿದೆ, ಸ್ನೇಹ ಪ್ರೇಮಕ್ಕೆ ತಿರುಗಿದೆ. ಇಬ್ಬರೂ ಪ್ರೀತಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ
Image
ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು!
Image
ಮನೆ ಕೆಲಸದವನಿಂದಲೇ ಮಹಿಳೆ, ಮಗನ ಗಂಟಲು ಸೀಳಿ ಬರ್ಬರ ಹತ್ಯೆ
Image
ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ
Image
ಡೆಲಿವರಿ ಬಾಯ್​ನಿಂದ ಯುವತಿ ಮೇಲೆ ಅತ್ಯಾಚಾರ

ಕಳೆದ ಕೆಲವು ದಿನಗಳ ಹಿಂದೆ ಪ್ರೇಮಿಗಳು ಮನೆ ಬಿಟ್ಟು ಹೋಗಿ ದೇವಸ್ಥಾನವೊಂದರಲ್ಲಿ ಮದುವೆನೂ ಆಗಿದ್ದರು. ಆದರೆ, ಯುವತಿಯ ಪೊಷಕರು ತಮ್ಮ ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಆಗ ಜೋಡಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಬಂದಾಗ ಆಗಬಾರದ ಘಟನೆ ಆಗಿದೆ.

ಠಾಣೆಯಲ್ಲೇ ದಂಪತಿಯನ್ನು ದೂರ ಮಾಡಲು ಯುವತಿಯ ಪೊಷಕರು ಪ್ರಯತ್ನ ಮಾಡಿದ್ದಾರೆ. ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿದ್ದಾರಂತೆ. ಆದರೂ, ಯುವತಿ ಏನೇ ಆದ್ರು ಶೇಖರ್ ಜೊತೆ ಹೋಗುವುದಾಗಿ ಪಟ್ಟು ಹಿಡಿದಿದ್ದಳಂತೆ.

ಇದನ್ನೂ ಓದಿ: ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ: ಶವಕ್ಕೆ ಸ್ನಾನ ಮಾಡಿ ಮಲಗಿಸಿ ನಾಟಕ!

ಆಗ, ಆಷಾಢ ಮಾಸ ಕಳೆದ ನಂತರ ಇಬ್ಬರಿಗೆ ಕಲ್ಯಾಣ ಮಂಟಪದಲ್ಲಿ ಮರು ಮದುವೆ ಮಾಡುವುದಾಗಿ ನಂಬಿಸಿ ಇಬ್ಬರನ್ನೂ ಯುವತಿ ಪೋಷಕರು ತಮ್ಮ ಕಾರಿನಲ್ಲಿ ಕರೆದುಕೊಂಡು ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಹೊರಟಿದ್ದಾರೆ. ದಾರಿ ಮಧ್ಯೆ ಶೇಖರ್​ನನ್ನು ಕಾರಿನಿಂದ ಕೆಳಗೆ ತಳ್ಳಿ, ತಮ್ಮ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಾರಂತೆ.

ಶುಕ್ರವಾರ (ಜು.04) ಬೆಳಿಗ್ಗೆ ಶೇಖರ್ ತನ್ನ ಪ್ರಿಯತಮೆಯನ್ನು ಭೇಟಿ ಮಾಡಲು ಆಕೆಯ ಮನೆ ಬಳಿ ಹೋಗಿದ್ದಾರೆ. ಆಗ ಆಕೆಯ ಪೋಷಕರು ಬೈಯ್ದು ವಾಪಸ್ ಕಳುಹಿಸಿದ್ದಾರೆ. ಇದರಿಂದ ಮನನೊಂದ ಶೇಖರ್ ವಾಪಸ್ ತನ್ನೂರಿಗೆ ಆಗಮಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
OSZAR »