ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಸಂಕಷ್ಟ
ಆದಾಯ ಮೀತಿ ಅಕ್ರಮ ಆಸ್ತಿ ಗಳಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಶಿವಮೊಗ್ಗದ ವಕೀಲ ಬಿ ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಕ್ರಿಮಿನಲ್ ಪ್ರಕರಣ ಬಗ್ಗೆ ತನಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸ್ ಗೆ ಆದೇಶಿಸಿದ್ದು, ಅದರಂತೆ ಇದೀಗ ಲೋಕಾಯುಕ್ತ ತನಿಖೆಗೆ ಮುಂದಾಗಿದೆ.

ಶಿವಮೊಗ್ಗ, (ಜುಲೈ 03): ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ (KS Eshwarappa), ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಕೀಲ ವಿನೋದ ಅವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿತ್ತು. ಅದರಂತೆ ಇದೀಗ ಶಿವಮೊಗ್ಗ ಲೋಕಾಯುಕ್ತ (Shivamogga Lokayukta) ಈಶ್ವರಪ್ಪ, ಕಾಂತೇಶ್ ಹಾಗೂ ಶಾಲಿನಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ನಾಳೆ(ಜುಲೈ 04) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಈಶ್ವರಪ್ಪ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನ ಆದೇಶದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈಶ್ವರಪ್ಪ ವಿರುದ್ಧ ಸೆಕ್ಷನ್ 13(1)(d), 13(1)(e), 120(B), 420ರಡಿ ಎಫ್ಐಆರ್ ದಾಖಲಾಗಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಶಿವಮೊಗ್ಗ ಲೋಕಾಯುಕ್ತ ನೋಟಿಸ್ ನೀಡಿದೆ. ಆದ್ರೆ, ಈಶ್ವರಪ್ಪ ಕುಟುಂಬ ಕೇರಳ ಪ್ರವಾಸದಲ್ಲಿದೆ.
ಇದನ್ನೂ ಓದಿ: ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ರವಿಕುಮಾರ್
ಶಿವಮೊಗ್ಗದ ವಕೀಲ ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕ್ರಿಮಿನಲ್ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಏಪ್ರಿಲ್ 24ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಲೋಕಾಯುಕ್ತ ಡಿವೈಎಸ್ ಪಿ ಚಂದ್ರಶೇಖರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಇದೀಗ ಕಾನೂನು ಪರಿಣಿತರ ಅಭಿಪ್ರಾಯ ಪಡೆದ ಲೋಕಾಯುಕ್ತ ಪೊಲಿಸರು, ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.
ಪ್ರಕರಣದ ಹಿನ್ನೆಲೆ
ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ 1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರುದಾರ ಬಿ ವಿನೋದ್ ಅವರು 2-26ರಲ್ಲಿ ಸಲ್ಲಿಸಿದ್ದ ಈ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋಧ್ ಹೈಕೋರ್ಟ್ ಮೆಟ್ಟಿಲೇರಿದ್ದು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಗಣನೆಗೆ ಆದೇಶಿಸಿತ್ತು.